Friday, May 17, 2024
Homeಅಪರಾಧಮಂಗಳೂರು: ಆದಾಯಕ್ಕಿಂತ ಅಧಿಕ ಸಂಪತ್ತು ಹೊಂದಿದ ಅಧಿಕಾರಿಗೆ 6 ವರ್ಷ ಜೈಲು ಶಿಕ್ಷೆ ಹಾಗು ...

ಮಂಗಳೂರು: ಆದಾಯಕ್ಕಿಂತ ಅಧಿಕ ಸಂಪತ್ತು ಹೊಂದಿದ ಅಧಿಕಾರಿಗೆ 6 ವರ್ಷ ಜೈಲು ಶಿಕ್ಷೆ ಹಾಗು 75 ಲಕ್ಷ ರೂ. ದಂಡ….!

spot_img
- Advertisement -
- Advertisement -

ಮಂಗಳೂರು: ಆದಾಯಕ್ಕಿಂತ ಅಧಿಕ ಸಂಪತ್ತು ಹೊಂದಿದ ಆರೋಪದಡಿಯಲ್ಲಿಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಶಕ್ತಿನಗರ ಡಿಪೋದ ಕಿರಿಯ ಸಹಾಯಕ ಎಂ.ಎನ್. ರಾಜನ್ ನಂಬಿಯಾರ್ ಶಿಕ್ಷೆಗೊಳಗಾದ ಅಧಿಕಾರಿಗೆ ಶಿಕ್ಷೆ ವಿಧಿಸಿ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸೋಮವಾರ ತೀರ್ಪು ನೀಡಿದೆ.

ಆರೋಪಿ ವಿರುದ್ದ 7 ವರ್ಷದ ಹಿಂದೆ ಲೋಕಾಯುಕ್ತ ಪೊಲೀಸರಿಂದ ದಾಳಿಗೊಳಗಾಗಿ ವಿಚಾರಣೆ ಎದುರಿಸುತ್ತಿದ್ದರು ಇವರು ಆದಾಯಕ್ಕಿಂತ ಅಧಿಕ ಸಂಪತ್ತು ಹೊಂದಿದ್ದಾರೆ ಎಂಬ ಆರೋಪವಿತ್ತು. ಈ ಬಗ್ಗೆ ಬಂದ ಮಾಹಿತಿಯ ಮೇರೆಗೆ ಲೋಕಾಯುಕ್ತದ ಡಿವೈಎಸ್ಪಿ ಉಮೇಶ್ ಶೇಟ್ ನೇತೃತ್ವದ ತಂಡವು 2014ರ ಜನವರಿ 28ರಂದು ದಾಳಿ ನಡೆಸಿ ಕಾನೂನು ಕ್ರಮ ಜರಗಿಸಿತ್ತು.

ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಆರೋಪಿ ರಾಜನ್ ನಂಬಿಯಾರ್‌ಗೆ 6 ವರ್ಷ ಶಿಕ್ಷೆ ಮತ್ತು 75 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಮತ್ತೆ 2 ವರ್ಷ ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ರವೀಂಧ್ರ ಮನ್ನಿಪ್ಪಾಡಿ ವಾದಿಸಿದ್ದರು.

- Advertisement -
spot_img

Latest News

error: Content is protected !!