Wednesday, June 3, 2026
Homeಕರಾವಳಿಕಡಬ; ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ

ಕಡಬ; ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ

- Advertisement -
- Advertisement -

ಕಡಬ; ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ.

ಬಿಳಿನೆಲೆಯ ಚಂದ್ರಶೇಖರ್ ಎಂಬವರು ಎ.19ರಂದು , ಮುಂಜಾನೆ  ಸ್ಥಳೀಯರೊಂದಿಗೆ ಕಾಡಿಗೆ ಕಟ್ಟಿಗೆ ಸೌದೆ  ತರಲು ಹೋದಾಗ ದಾರಿ  ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗ್ ಪತ್ತೆಯಾಗಿದೆ .ಅಲ್ಲದೆ ಸ್ವಲ್ಪ ದೂರದ  ಮರದಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ ನೇತಾಡುತ್ತಿರುವುದು ಕಂಡುಬಂದಿದೆ.

ಅಸ್ಥಿಪಂಜರ ದೊರಕಿರುವ ಬಗ್ಗೆ ಸಂಶಯವಿರುವುದಾಗಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸು ಠಾಣೆಯಲ್ಲಿ ಯು ಡಿ ಆರ್‌ : 12/2024 ಕಲಂ:174 (3),(iv) CrPC ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆಗೆ ಮುಂದಾಗಿದ್ದಾರೆ.

- Advertisement -

Latest News

error: Content is protected !!