Wednesday, June 3, 2026
Homeತಾಜಾ ಸುದ್ದಿಕೋವಿಡ್ 4ನೇ ಅಲೆ ಬಂದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕೋವಿಡ್ 4ನೇ ಅಲೆ ಬಂದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

- Advertisement -
- Advertisement -

ಹುಬ್ಬಳ್ಳಿ: ರಾಜ್ಯದಲ್ಲಿ ಕೋವಿಡ್ 4ನೇ ಅಲೆ ಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 9 ರ ನಂತರ ಸ್ವಲ್ಪ ಪ್ರಮಾಣದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವದುದನ್ನು ಗಮನಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ಯೂರೋಪ್ ಮತ್ತು ಇತರೆ ರಾಷ್ಟ್ರಗಳಲ್ಲಿ ಲಸಿಕೆ ಪಡೆಯದವರಿಂದ ಪುನಃ ಪ್ರಕರಣಗಳು ಉಲ್ಬಣವಾಗಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಎರಡೂ ಡೋಸ್ ಗಳನ್ನು 98% ರಷ್ಟು ಜನ ಲಸಿಕೆ ಪಡೆದಿದ್ದಾರೆ. ಮುನ್ನೆಚ್ಚರಿಕಾ ಡೋಸ್ ಗಳನ್ನು ಇನ್ನಷ್ಟು ಜನಕ್ಕೆ ನೀಡುವ ಬಗ್ಗೆ ಗಮನ ಹರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮೊನ್ನೆ ಕೇಂದ್ರ ಸರ್ಕಾರ 6ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಹಾಕಲು ಅನುಮೋದನೆ ನೀಡಿದೆ. ಅದನ್ನು ಪ್ರಾಥಮಿಕ ಶಾಲೆಗಳಲ್ಲಿ ಪ್ರಾರಂಭಿಸುವ ತೀರ್ಮಾನ ಮಾಡಲಾಗಿದೆ. ಲಸಿಕೆ ಹಾಕಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಕೂಡಾ ಸಿಎಂ ತಿಳಿಸಿದ್ದಾರೆ.

- Advertisement -

Latest News

error: Content is protected !!