Thursday, June 4, 2026
Homeಕರಾವಳಿಉಡುಪಿಕಾರ್ಕಳ; ನಾಗರ ಹಾವು ಕಚ್ಚಿ ಯುವಕ ಸಾವು

ಕಾರ್ಕಳ; ನಾಗರ ಹಾವು ಕಚ್ಚಿ ಯುವಕ ಸಾವು

- Advertisement -
- Advertisement -

ಕಾರ್ಕಳ; ನಾಗರ ಹಾವು ಕಚ್ಚಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳದ ನಲ್ಲೂರು ಗ್ರಾಮದಲ್ಲಿ ನಡೆದಿದೆ. ಸಂತೋಷ (32) ಮೃತ ಯವಕ.

ಸಂತೋಷ್ ಅವರು ಮನೆಯ ಹತ್ತಿರ ಕೃಷಿ ಕೆಲಸದಲ್ಲಿ ನಿರತರಾಗಿದ್ದಾಗ  ಅವರ ಎಡಕಾಲಿಗೆ ನಾಗರಹಾವು ಕಚ್ಚಿದೆ. ಕೂಡಲೇ ಅವರ ತಾಯಿ ಮತ್ತು ಸಂಬಂಧಿಕರು ಚಿಕಿತ್ಸ ಗಾಗಿ ಕಾರ್ಕಳದ ಡಾ. ಟಿಎಂಎ ಪೈ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿಂದ ಚಿಕಿತ್ಸೆಗಾಗಿ ಪುನಃ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದ ಸಂತೋಷರವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



- Advertisement -

Latest News

error: Content is protected !!