Friday, June 5, 2026
Homeಕರಾವಳಿಬಂಟ್ವಾಳ; ಸಾಮಾಜಿಕ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಂಟ್ವಾಳ; ಸಾಮಾಜಿಕ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಬಂಟ್ವಾಳ; ಸಾಮಾಜಿಕ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಾಮದಪದವು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಮೃತ ದುರ್ದೈವಿ.

ಪದ್ಮನಾಭ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿದ್ದರು. ಮಾಹಿತಿ ಹಕ್ಕು ಮೂಲಕ ಮಾಹಿತಿ ಪಡೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದರು. ಆದರೆ ಇತ್ತೀಚೆಗೆ ಅವರ ಮೇಲೆಯೇ ವಂಚನೆ ಆರೋಪ ಕೇಳಿಬಂದಿತ್ತು. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ರೂ. ಹಣವನ್ನು ಪಡೆದುಕೊಂಡು ವಂಚಿಸಿದ್ದ ಎಂದು ಯುವಕ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಈ ಕುರಿತು ಪದ್ಮನಾಭ ಸಾಮಂತ ವಿಚಾರಣೆಗೆ ಹಾಜರಾಗುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದು,ಆದರೆ ಕಳೆದ ಮೂರು ದಿನಗಳಿಂದ ಠಾಣೆಗೆ ಹಾಜರಾಗಿರಲಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಪದ್ಮನಾಭ ಅವರು ತಾಯಿ, ಸಹೋದರನೊಂದಿಗೆ ವಾಸವಿದ್ದು, ನಿರ್ದಿಷ್ಟ ಉದ್ಯೋಗ ಹೊಂದಿರಲಿಲ್ಲ. ಮನೆಯ ಹಿಂಬದಿಯ ಗುಡ್ಡದಲ್ಲಿ ಮೃತದೇಹ ಕಂಡುಬಂದಿದ್ದು, ಭಾನುವಾರ ಬೆಳಗ್ಗೆ ವಾಸನೆದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ.


ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿ, ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು,ಸಾವಿನ ಕುರಿತು ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!