Thursday, June 25, 2026
Homeತಾಜಾ ಸುದ್ದಿಮಂಗಳೂರು: ಜಾಮೀನಿನ ಮೇಲೆ ಬಿಡುಗಡೆಗೊಂಡ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ

ಮಂಗಳೂರು: ಜಾಮೀನಿನ ಮೇಲೆ ಬಿಡುಗಡೆಗೊಂಡ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ

- Advertisement -
- Advertisement -

ಮಂಗಳೂರು: ಫೇಸ್‌ಬುಕ್‌ ಪೋಸ್ಟ್‌ವೊಂದಕ್ಕೆ ಸಂಬಂಧಿಸಿ ಶುಕ್ರವಾರ ರಾತ್ರಿ ಬಂಧಿತರಾಗಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ನಿನ್ನೆ ಮಧ್ಯರಾತ್ರಿ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ರು. ಸುನೀಲ್ ಬಜಿಲಕೇರಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅವರನ್ನ ಉರ್ವ ಪೊಲೀಸ್ ಠಾಣೆಯಲ್ಲಿರಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ ಎಂದು ತಿಳಿದುಬಂದಿದೆ. ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅವರು ಬಿಜೆಪಿ ನಾಯಕರ ಕಾರ್ಯವೈಖರಿಯನ್ನು ಟೀಕಿಸುತ್ತಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!