Wednesday, June 24, 2026
Homeಉದ್ಯಮಸಾಮಾಜಿಕ ಮಾಧ್ಯಮ`ಕೂ ಆ್ಯಪ್’ ಸ್ಥಗಿತ

ಸಾಮಾಜಿಕ ಮಾಧ್ಯಮ`ಕೂ ಆ್ಯಪ್’ ಸ್ಥಗಿತ

- Advertisement -
- Advertisement -

ಟ್ವಿಟರ್ ಗೆ ಪರ್ಯಾಯವಾಗಿ ಕಳೆದ ನಾಲ್ಕು ವರ್ಷದ ಹಿಂದೆ ಅಸ್ತಿತ್ವಕ್ಕೆ ತಂದಿದ್ದ ಕೂ ಆ್ಯಪ್ ಅನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಕಂಪೆನಿಯ ಸಂಸ್ಥಾಪಕರು ಅಧಿಕೃತ ಹೇಳಿಕೆ ನೀಡಿದ್ದಾರೆ.

ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್‌ಗೆ (ಈಗಿನ ಎಕ್ಸ್) ಪೈಪೋಟಿ ನೀಡಲು ಅಸ್ತಿತ್ವಕ್ಕೆ ಬಂದಿದ್ದ ದೇಶಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಕಂಪೆನಿಯ ಸಂಸ್ಥಾಪಕರು ಅಧಿಕೃತ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಆರಂಭದಲ್ಲಿ 20 ಲಕ್ಷ ದೈನಂದಿನ ಸಕ್ರಿಯ ಬಳಕೆದಾರರನ್ನು ಒಳಗೊಂಡಂತೆ 1 ಕೋಟಿ ಮಾಸಿಕ ಬಳಕೆದಾರರನ್ನು ಹೊಂದಿದ್ದ ಆ್ಯಪ್, 5 ಬಿಲಿಯನ್ ಡಾಲರ್ ಮೌಲ್ಯಕ್ಕೆ ಕೂ ಅನ್ನು ಮಾರಾಟ ಮಾಡುವ ಕುರಿತು ಮಾತುಕತೆ ಕೂಡ ನಡೆದಿತ್ತು. ಆದರೆ ಕೊನೆಯಲ್ಲಿ ಈ ಮಾತುಕತೆ ಕೂಡ ವಿಫಲವಾಗಿದ್ದು, ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಬಳಕೆದಾರರರನ್ನು ಹೊಂದಿದ್ದ ‘ಕೂ’ ಇದೀಗ ಸ್ಥಗಿತವಾಗುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕರು ಹೇಳಿಕೊಂಡಿದ್ದಾರೆ.

‘ಕೂ’ ಕಂಪನಿಯ ಸಹ-ಸಂಸ್ಥಾಪಕ ಮಯಾಂಕ್ ಬಿಡವಟ್ಕಾ ಅವರು ಇತ್ತೀಚೆಗೆ ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್‌ನಲ್ಲಿ ಈ ಮಾಹಿತಿ ನೀಡಿದ್ದು, ‘ನಾವು ಅನೇಕ ದೊಡ್ಡ ಇಂಟರ್ನೆಟ್ ಕಂಪನಿಗಳು, ಮಾಧ್ಯಮ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದ್ದೇವೆ ಆದರೆ ನಾವು ಬಯಸಿದ ಫಲಿತಾಂಶ ಸಿಗಲಿಲ್ಲ ಹಾಗಾಗಿ ಕೊನೆಗೆ ಈ ನಿರ್ಧಾರಕ್ಕೆ ಬರಬೇಕಾಯಿತು,’ ಎಂದು ಹೇಳಿಕೊಂಡಿದ್ದಾರೆ.

- Advertisement -

Latest News

error: Content is protected !!