Sunday, June 7, 2026
Homeಕರಾವಳಿಉಡುಪಿಉಡುಪಿ: ಮಕ್ಕಳೊಂದಿಗೆ ಆತ್ಮಹತ್ಯೆಗೆ ಹೊರಟ ಮಹಿಳೆಯ ರಕ್ಷಣೆ

ಉಡುಪಿ: ಮಕ್ಕಳೊಂದಿಗೆ ಆತ್ಮಹತ್ಯೆಗೆ ಹೊರಟ ಮಹಿಳೆಯ ರಕ್ಷಣೆ

- Advertisement -
- Advertisement -

ಉಡುಪಿ: ಕೌಟುಂಬಿಕ ಕಲಹದಿಂದ ಬೇಸತ್ತು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಮಹಿಳೆಯು ಮೂಲತಃ ಹೊರರಾಜ್ಯದವಳಾಗಿದ್ದು, ಗಂಡನೊಂದಿಗೆ ಮನಸ್ತಾಪದಿದಂ ಬೇಸತ್ತು ನಗರ ಬಸ್ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣಕ್ಕೆ ಹೋಗಲು ಕಣ್ಣೀರಿಡುತ್ತಿದ್ದಳು. ಅಲ್ಲದೇ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಳು ಎನ್ನಲಾಗಿದೆ. ಇದನ್ನು ಗಮನಿಸಿದ ಬಸ್ ನಿರ್ವಾಹಕರೊಬ್ಬರು ವಿಶು ಶೆಟ್ಟಿ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ಮಹಿಳೆ ಮತ್ತು ಮಕ್ಕಳನ್ನು ರಕ್ಷಿಸಿ ತನ್ನ ವಾಹನದಲ್ಲಿ ಕರೆದುಕೊಂಡು ಹೋಗಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ.

- Advertisement -

Latest News

error: Content is protected !!