Friday, April 26, 2024
Homeಉದ್ಯಮರಾತ್ರಿ ವಾಟ್ಸಾಪ್, ಫೇಸ್ ಬುಕ್ ಸರ್ವರ್ ಡೌನ್ ;ಸೋಶಿಯಲ್ ಮೀಡಿಯಾ ಗ್ರಾಹಕರ ಪರದಾಟ!

ರಾತ್ರಿ ವಾಟ್ಸಾಪ್, ಫೇಸ್ ಬುಕ್ ಸರ್ವರ್ ಡೌನ್ ;ಸೋಶಿಯಲ್ ಮೀಡಿಯಾ ಗ್ರಾಹಕರ ಪರದಾಟ!

spot_img
- Advertisement -
- Advertisement -

ನವದೆಹಲಿ: ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಸೇರಿದಂತೆ ಹಲವು ಜಾಲತಾಣಗಳ ಸರ್ವರ್ ಡೌನ್ ಆಗಿ ಸೇವೆಯಲ್ಲಿ ಅಡಚಣೆಯಾಗಿ ಬಳಕೆದಾರರು ಗಂಟೆಗಟ್ಟಲೆ ತೊಂದರೆ ಅನುಭವಿಸಿದ್ದಾರೆ.

ರಾತ್ರಿ 9 -10 ಗಂಟೆ ಸುಮಾರಿಗೆ ಈ ಅಡಚಣೆ ಉಂಟಾಗಿದ್ದು, ಬಳಕೆದಾರರು ತಮಗೆ ಆದ ತೊಂದರೆಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.ಫೇಸ್ ಬುಕ್, ವಾಟ್ಸಾಪ್, ಇನ್ ಸ್ಟಾಗ್ರಾಂ ಸೇರಿದಂತೆ ಹಲವು ಜಾಲತಾಣಗಳ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಹೊಸ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗಿಲ್ಲ.

ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಸೋಮವಾರ ರಾತ್ರಿ ಭಾರತ ಮತ್ತು ವಿಶ್ವದ ಕೆಲವು ಭಾಗಗಳಲ್ಲಿ ಸ್ಥಗಿತಗೊಂಡಿದೆ. ವಾಟ್ಸಾಪ್ ಸರ್ವರ್ ದೋಷವನ್ನು ತೋರಿಸುತ್ತಿದ್ದು, ಇನ್ಸ್ಟಾಗ್ರಾಮ್ ಬಳಕೆದಾರರ ಫೀಡ್ ಅನ್ನು ರಿಫ್ರೆಶ್ ಮಾಡುತ್ತಿಲ್ಲ.ಕ್ಷಮಿಸಿ, ಏನೋ ಸರಿಯಾಗಿಲ್ಲ. ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ ಮತ್ತು ನಾವು ಅದನ್ನು ಆದಷ್ಟು ಬೇಗ ಸರಿಪಡಿಸುತ್ತೇವೆ ಎಂದು ಫೇಸ್‌ಬುಕ್ ವೆಬ್‌ಸೈಟ್‌ನಲ್ಲಿ ಸಂದೇಶವೊಂದು ಹೇಳಿದೆ.

ಈ ಸಮಯದಲ್ಲಿ ಕೆಲವರು ವಾಟ್ಸಾಪ್‌ನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಮಗೆ ತಿಳಿದಿದೆ. ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತರಲು ನಾವು ಕೆಲಸ ಮಾಡುತ್ತಿದ್ದೇವೆ ಮತ್ತು ಸಾಧ್ಯವಾದಷ್ಟು ಬೇಗ ಇಲ್ಲಿ ಅಪ್‌ಡೇಟ್ ಕಳುಹಿಸುತ್ತೇವೆ ಎಂದು ವಾಟ್ಸಾಪ್ ಹೇಳಿದೆ.

ವಾಟ್ಸಾಪ್ ಸ್ಥಗಿತಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ ಡೌನ್‌ಟೆಕ್ಟರ್ ಪ್ರಕಾರ, ಶೇ. 40 ರಷ್ಟು ಬಳಕೆದಾರರಿಗೆ ಆಪ್ ಡೌನ್‌ಲೋಡ್ ಮಾಡಲು ಸಾಧ್ಯವಾಗಲಿಲ್ಲ. ಶೇ. 30 ರಷ್ಟು ಜನರಿಗೆ ಸಂದೇಶ ಕಳುಹಿಸಲು ತೊಂದರೆಯಾಗಿದೆ ಮತ್ತು ಶೇ. 22 ರಷ್ಟು ಜನರು ವೆಬ್ ಆವೃತ್ತಿಯಲ್ಲಿ ಸಮಸ್ಯೆಗಳನ್ನು ಹೊಂದಿದ್ದಾರೆ.

ಇನ್ನು ಈ ನಡುವೆ ಸಂಸ್ಥೆ ಕ್ಷಮೀಯಾಚಿಸಿದ್ದು ಏನೋ ತಪ್ಪಾಗಿದೆ. ಇದರ ಮೇಲೆ ಕೆಲಸ ಮಾಡಲಾಗುತ್ತಿದೆ. ಆದಷ್ಟು ಬೇಗ ಅದನ್ನು ಸರಿಪಡಿಸುತ್ತೇವೆ ಎಂದು ಫೇಸ್ ಬುಕ್ ವೆಬ್ ಸೈಟ್ ನಲ್ಲಿ ಸಂದೇಶವೊಂದನ್ನು ಹಾಕಲಾಗಿದೆ.

- Advertisement -
spot_img

Latest News

error: Content is protected !!