Sunday, June 28, 2026
Homeಕರಾವಳಿಬಂಟ್ವಾಳ: ಕಾಂಪೌಂಡ್ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ:ಪ್ರಾಣಾಪಾಯದಿಂದ ಪಾರಾದ ಇಬ್ಬರು ಕಾರ್ಮಿಕರು

ಬಂಟ್ವಾಳ: ಕಾಂಪೌಂಡ್ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ:ಪ್ರಾಣಾಪಾಯದಿಂದ ಪಾರಾದ ಇಬ್ಬರು ಕಾರ್ಮಿಕರು

- Advertisement -
- Advertisement -

ಬಂಟ್ವಾಳ: ಮನೆಯ ಕಾಂಪೌಂಡ್ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿಹಾಕಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಸೂರಿಕುಮೇರ್ ಬಳಿ ನಡೆದಿದೆ. ಜೆಸಿಂತಾ ಮಾರ್ಟಿಸ್ ಎಂಬವರಿಗೆ ಸೇರಿದ ಮನೆಯ ಕಾಂಪೌಂಡ್ ನಿರ್ಮಾಣ ಕಾಮಗಾರಿ ವೇಳೆ ಈ ಘಟನೆ ಸಂಭವಿಸಿದ್ದು, ಕಾಮಗಾರಿ ನಿರ್ಮಾಣ ಸ್ಥಳದ ಮೇಲಿನ‌ ಗುಡ್ಡದ ಮಣ್ಣು ಕುಸಿದು ಬಿದ್ದಿದೆ.

ರಾಜೇಶ್ ನಾಯ್ಕ್ ಬಾಯಿಲ ಮತ್ತು ಉಮೇಶ್ ನಾಯ್ಕ್ ಎಂಬ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಅಪಾಯದಿಂದ ಪಾರಾಗಿದ್ದಾರೆ. ಮಣ್ಣು ಕುಸಿದು ಬಿದ್ದ ಕೂಡಲೇ ಇಬ್ಬರನ್ನೂ ರಕ್ಷಣೆ ಮಾಡಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!