Friday, June 26, 2026
Homeಕರಾವಳಿಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ:ದ.ಕ. ಮೂಲದ ಯೋಧ ಪ್ರಾಂಜಲ್ ಹುತಾತ್ಮ

ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ:ದ.ಕ. ಮೂಲದ ಯೋಧ ಪ್ರಾಂಜಲ್ ಹುತಾತ್ಮ

- Advertisement -
- Advertisement -

ಮಂಗಳೂರು: ಭಾರತೀಯ ಸೇನೆಯಲ್ಲಿ ಯೋಧನಾಗಿದ್ದ ಮಂಗಳೂರಿನ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ.ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಪ್ರಾಂಜಲ್ ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧ ಪ್ರಾಂಜಲ್ ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳ ಮೂಲದವರಾಗಿದ್ದಾರೆ.ಒಂದೂವರೆ ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಪ್ರಾಂಜಲ್, ತಂದೆ ತಾಯಿಗೆ ಏಕೈಕ ಪುತ್ರನಾಗಿದ್ದರು.

ಪ್ರಾಂಜಲ್ ಸೇರಿದಂತೆ ಒಟ್ಟು ನಾಲ್ವರು ವೀರ ಯೋಧರು ಉಗ್ರರ‌ ಜೊತೆಗಿನ ಕಾಳಗದಲ್ಲಿ ಹುತಾತ್ಮರಾಗಿದ್ದಾರೆ.

- Advertisement -

Latest News

error: Content is protected !!