Thursday, June 4, 2026
Homeತಾಜಾ ಸುದ್ದಿಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ಭಾರತೀಯ ಯೋಧರು ಹುತಾತ್ಮ

ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ಭಾರತೀಯ ಯೋಧರು ಹುತಾತ್ಮ

- Advertisement -
- Advertisement -

ಜಮ್ಮು-ಕಾಶ್ಮೀರ : ಪದೇ ಪದೇ ತನ್ನ ನರಿ ಬುದ್ಧಿ ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ತೀವ್ರ ಶೆಲ್ಲಿಂಗ್ ನಲ್ಲಿ ಭಾರತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ ಒಸಿಯಲ್ಲಿನ ಸುಂದರ್ ಬನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಪಾಕಿಸ್ತಾನ ಸೇನೆಯ ತೀವ್ರ ಶೆಲ್ಲಿಂಗ್ ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಹುತಾತ್ಮ ಯೋಧರನ್ನು ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಮತ್ತು ರೈಫಲ್ಮನ್ ಸುಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಸೈನಿಕರನ್ನು ಸೇನಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!