Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಹೃದಯಾಘಾತದಿಂದ ಯೋಧ ಹುತಾತ್ಮ

ಮಂಗಳೂರಿನಲ್ಲಿ ಹೃದಯಾಘಾತದಿಂದ ಯೋಧ ಹುತಾತ್ಮ

- Advertisement -
- Advertisement -

ಮಂಗಳೂರು: ರಜೆ ಹಿನ್ನಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಹುತಾತ್ಮರಾದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ.

ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಮೃತ ಯೋಧ. ಗಡಿ ಭದ್ರತಾ ಪಡೆಯಲ್ಲಿ (ಬಿಎಸ್‌ಎಫ್) ಅವರು 21 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ರಜೆ ಹಾಕಿ ಊರಿಗೆ ಬಂದಿದ್ದ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  ಮೃತರು ಪತ್ನಿ, 6 ವರ್ಷದ ಪುತ್ರ ಹಾಗೂ ಒಂದೂವರೆ ವರ್ಷದ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!