Thursday, June 4, 2026
Homeತಾಜಾ ಸುದ್ದಿಹಾಸನದಲ್ಲಿ ಮಹಿಳಾ ಪಿಎಸ್ ಐ ಮನೆಗೆ ಬೆಂಕಿ ಇಟ್ಟ ಪಾಪಿಗಳು

ಹಾಸನದಲ್ಲಿ ಮಹಿಳಾ ಪಿಎಸ್ ಐ ಮನೆಗೆ ಬೆಂಕಿ ಇಟ್ಟ ಪಾಪಿಗಳು

- Advertisement -
- Advertisement -

ಹಾಸನ; ಮಹಿಳಾ ಪಿಎಸ್ ಐ  ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.

ಕೊಣನೂರು ಪೊಲೀಸ್ ಠಾಣೆಯ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದಾಗ  ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.ಬೆಂಕಿಯಿಂದ ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸ್ಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!