Wednesday, June 24, 2026
Homeತಾಜಾ ಸುದ್ದಿಹೆತ್ತ ತಂದೆ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಮಗ

ಹೆತ್ತ ತಂದೆ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಮಗ

- Advertisement -
- Advertisement -

ಬೆಂಗಳೂರು;ಮಗನೊಬ್ಬ ಹೆತ್ತ ತಂದೆ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ನಿವೃತ್ತ ನೇವಿ ಕ್ಯಾಪ್ಟನ್ ನವೀನ್ ಚಂದ್ರ ಭಟ್ (60) ಪತ್ನಿ ಡಾ.ಶ್ಯಾಮಲಾ ಭಟ್(55) ಮೃತ ದುರ್ದೈವಿಗಳು. ಸ್ವಂತ ಸಾಫ್ಟ್ವೇರ್ ಕಂಪನಿ ಹೊಂದಿದ್ದ ಮಗ ರೋಹನ್ ಚಾಕುವಿನಿಂದ ಮನಸೋ ಇಚ್ಚೆ ಹಲ್ಲೆ ಮಾಡಿದ್ದ. ಬಳಿಕ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆ ಸೇರಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಗಂಡ ಹೆಂಡತಿ ಇಬ್ಬರೂ ಪ್ರಾಣ ಬಿಟ್ಟಿದ್ದಾರೆ. ಮೃತದೇಹಗಳನ್ನ ಬೌರಿಂಗ್ ಆಸ್ಪತ್ರೆ ರವಾನಿಸಿದ್ದಾರೆ. ಸದ್ಯ ಹಂತಕ ರೋಹನ್ ಭಟ್ ನನ್ನು ಹೆಚ್‌ಎಎಲ್‌ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!