Wednesday, July 15, 2026
Homeಚಿಕ್ಕಮಗಳೂರುಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊ*ಲೆ

ಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊ*ಲೆ

- Advertisement -
- Advertisement -

ಚಿಕ್ಕಮಗಳೂರು: ಅಳಿಯನೇ ಅತ್ತೆಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. ಯಮುನಾ(65) ಕೊಲೆಯಾದ ಮಹಿಳೆ. ಅಳಿಯ ಶಶಿಧರ್‌ ಕೊಲೆ ಮಾಡಿದ್ದಾನೆ.

ಯಮುನಾ ಅವರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಶಶಿಧರ್ ಪರಾರಿಯಾಗಿದ್ದಾನೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಶಶಿಧರ್‌ನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕೊಲೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!