Friday, June 5, 2026
Homeಕರಾವಳಿಉಡುಪಿಉಡುಪಿ: ಹಣಕ್ಕಾಗಿ ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಉಡುಪಿ: ಹಣಕ್ಕಾಗಿ ತಾಯಿಯನ್ನೇ ಕೊಲೆಗೈದ ಪಾಪಿ ಮಗ

- Advertisement -
- Advertisement -

ಉಡುಪಿ: ಹಣಕ್ಕಾಗಿ ಪಾಪಿ ಮಗನೊಬ್ಬ ತಾಯಿಯನ್ನೇ ಕೊಲೆಗೈದ ಹೀನ ಕೃತ್ಯ ಮಣಿಪಾಲದಲ್ಲಿ ನಡೆದಿದೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ. ಈಶ ನಾಯಕ್(26) ಕೊಲೆಗೈದ ಮಗ.

ಜೂ.18ರಂದು ರಾತ್ರಿ ಪದ್ಮಾಬಾಯಿ ಸೋಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು ರಾತ್ರಿ ಪದ್ಮಾಬಾಯಿ ಅವರ ಮಗ ಈಶ, ಪದ್ಮಬಾಯಿ ಅವರ ತಂಗಿ ಶಿಲ್ಪಾ ಎಂಬವರಿಗೆ ಕರೆ ಮಾಡಿ ತಾಯಿಗೆ ಹುಷಾರಿಲ್ಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದನು. ಅದರಂತೆ ಶಿಲ್ಪಾ ಆನ್‌ಲೈನ್ ಮೂಲಕ ಹಣ ಕಳುಹಿಸಿದ್ದರು. ಜೂ.19ರಂದು ಬೆಳಗ್ಗೆ ಈಶ, ಶಿಲ್ಪಾರಿಗೆ ಕರೆ ಮಾಡಿ, ತಾಯಿ ಬೆಳಗ್ಗೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ.

ಹಾಗೆ ಶಿಲ್ಪಾ ಆಸ್ಪತ್ರೆಗೆ ಬಂದು ನೋಡಿದಾಗ ಪದ್ಮಬಾಯಿ ಅವರ ಕುತ್ತಿಗೆ ಬಳಿ ಕೆಂಪಾಗಿದ್ದು ಕುತ್ತಿಗೆಯನ್ನು ಒತ್ತಿದ ರೀತಿ ಕಂಡುಬಂದಿದೆ. ಅವರ ಮರಣದಲ್ಲಿ ಸಂಶಯ ಇರುವುದಾಗಿ ಶಿಲ್ಪಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಣಿಪಾಲ ಆಸ್ಪತ್ರೆಯ ಶವಾಗಾರದಲ್ಲಿ ಆಸ್ಪತ್ರೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ವೈದ್ಯಕೀಯ ಶವ ಮರಣೋತ್ತರ ಪರೀಕ್ಷೆ ನಡೆಸಿದರು. ಜೂ.21ರಂದು ಆಸ್ಪತ್ರೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿ ಯವರು ಮೃತ ಪದ್ಮಾಬಾಯಿ ಅವರ ಮರಣದ ಬಗ್ಗೆ ಪ್ರಾಥಮಿಕ ಅಭಿಪ್ರಾಯ ವರದಿ ನೀಡಿದರು. ಅದರಲ್ಲಿ ಪದ್ಮಾಬಾಯಿ ಅವರನ್ನು ಯಾರೋ ದುಷ್ಕರ್ಮಿಗಳು ಜೂ.18ರಂದು ರಾತ್ರಿಯಿಂದ ಜೂ.19ರ ಬೆಳಗಿನ ನಡುವೆ ಕೊಲೆ ಮಾಡಿರುವುದಾಗಿ ದೃಢಪಟ್ಟಿದೆ. ಅದರಂತೆ ಮಣಿಪಾಲ ಪೊಲೀಸರು ಪ್ರಕರಣವನ್ನು ಕೊಲೆ ಪ್ರಕರಣವೆಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದರು.
ನಂತರದ ತನಿಖೆಯಲ್ಲಿ ಪದ್ಮಾಬಾಯಿ ಅವರನ್ನು ಅವರ ಮಗ ಈಶ ನಾಯ್ಕ್ ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಅದರಂತೆ ಪೊಲೀಸರು ಆರೋಪಿ ಈಶ ನಾಯಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ .

- Advertisement -

Latest News

error: Content is protected !!