Friday, July 17, 2026
Homeಅಪರಾಧಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

- Advertisement -
- Advertisement -

ಮುಂಬೈ: ಮುಂಬೈ ಕರಾವಳಿ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳಬಂಧಿಸಿದ್ದಾರೆ.

ಆರ್ಯನ್ ಖಾನ್, ಅರ್ಬಾಜ್ ಹಾಗೂ ಇನ್ನೋರ್ವನನ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದು, ಬಂಧಿತರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗುತ್ತಿದೆ.

ಮುಂಬೈನ ಸಮುದ್ರದ ಮಧ್ಯೆ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ನಿನ್ನೆ ತಡರಾತ್ರಿ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಡ್ರಗ್ಸ್ ಸೇವನೆಯಲ್ಲಿ ತೊಡಗಿದ್ದ 8 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವು ಹೈ ಪ್ರೊಫೈಲ್ ಉದ್ಯಮಿಗಳು, ಸೆಲೆಬ್ರಿಟಿಗಳ ಮಕ್ಕಳನ್ನು ವಶಕ್ಕೆ ಪಡೆಯಲಾಗಿತ್ತು.

- Advertisement -

Latest News

error: Content is protected !!