Monday, September 28, 2026
Homeಕರಾವಳಿಉಡುಪಿಹೆತ್ತ ತಾಯಿಯನ್ನು ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಮಗ

ಹೆತ್ತ ತಾಯಿಯನ್ನು ಕಾರಿನಲ್ಲಿ ಕರೆತಂದು ರಸ್ತೆಯಲ್ಲೇ ಬಿಟ್ಟು ತೆರಳಿದ ಮಗ

- Advertisement -
- Advertisement -

ಉಡುಪಿ: ಬ್ರಹ್ಮಾವರದ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆ ಬಳಿ 70 ವರ್ಷದ ವೃದ್ಧೆಯೊಬ್ಬರು ದಿಕ್ಕು ತೋಚದೆ ಅಲೆದಾಡುತ್ತಿದ್ದ ಘಟನೆ ನಡೆದಿದೆ. ಶಾಲಾ ಬಸ್ ಚಾಲಕ ರಾಮನಾಥ್ ಶೆಣೈ ಅವರು ವೃದ್ಧೆಯನ್ನು ಗಮನಿಸಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು.

ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ತೆರಳಿದ ನಿತ್ಯಾನಂದ ಒಳಕಾಡು ಅವರು 112 ತುರ್ತು ಪೊಲೀಸ್ ಸಹಾಯವಾಣಿ ಸಿಬ್ಬಂದಿಯ ನೆರವಿನಿಂದ ವೃದ್ಧೆಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದರು.

ದಾಖಲು ಪ್ರಕ್ರಿಯೆಯಲ್ಲಿ ವೃದ್ಧೆ ತನ್ನ ಹೆಸರು ಸರಸ್ವತಿ (70) ಎಂದು ಹಾಗೂ ತಮಿಳುನಾಡಿನ ತಿರುವಳ್ಳುವೂರು ನಿವಾಸಿ ಎಂದು ತಿಳಿಸಿದ್ದಾರೆ. ತನ್ನ ಮಗ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿದ್ದಾನೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಘಟನೆ ಕುರಿತು ನಿತ್ಯಾನಂದ ಒಳಕಾಡು ಅವರು ಮಹಿಳಾ ಪೊಲೀಸ್ ಠಾಣೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ. ವೃದ್ಧೆಯ ಕುಟುಂಬದವರನ್ನು ಪತ್ತೆಹಚ್ಚಿ, ಮುಂದಿನ ಕ್ರಮ ಕೈಗೊಳ್ಳುವ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!