Sunday, June 7, 2026
Homeತಾಜಾ ಸುದ್ದಿತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಮಗ...!

ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಮಗ…!

- Advertisement -
- Advertisement -

ಹುಬ್ಬಳ್ಳಿ: ಬಾಲಕನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಪುಂಡಲೀಕ ಒಂಟಿಗಡದ (43) ಹೆತ್ತ ಮಗನಿಂದಲೇ ಕೊಲೆಯಾದ ದುರ್ದೈವಿ. ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆಯ ವರ್ತನೆಯಿಂದ ರೋಸಿ ಹೋಗಿದ್ದ 17 ವರ್ಷದ ಮಗ, ಕೊಡಲಿಯಿಂದ ಕೊಚ್ಚಿ ತಂದೆಯನ್ನು ಕೊಲೆ ಮಾಡಿದ್ದಾನೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!