Wednesday, May 15, 2024
Homeಕರಾವಳಿಉಡುಪಿಕರಿಮಣಿ ಮಾಲೀಕ ನೀನಲ್ಲ ರೀಲ್ಸ್ ಬಳಸಿ ಶೋಭಾ ಕರಂದ್ಲಾಜೆ ವಿರುದ್ಧ ಹಾಡು; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಕರಿಮಣಿ ಮಾಲೀಕ ನೀನಲ್ಲ ರೀಲ್ಸ್ ಬಳಸಿ ಶೋಭಾ ಕರಂದ್ಲಾಜೆ ವಿರುದ್ಧ ಹಾಡು; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

spot_img
- Advertisement -
- Advertisement -

ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಲ್ಲೆಡೆ ಸದ್ದು ಮಾಡುತ್ತಿರುವ ಕರಿಮಣಿ ಮಾಲೀಕ ನೀನಲ್ಲ’ ರೀಲ್ಸ್ ಬಳಸಿಕೊಂಡು ಹಾಡನ್ನು ರಚಿಸಲಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಗೋ ಬ್ಯಾಕ್‌ ಶೋಭಾ ಅಭಿಯಾನ’ದ ಬಳಿಕ ಈ ವಿಡಿಯೋವನ್ನು ರಚಿಸಲಾಗಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯ ಹದಗೆಟ್ಟ ರಸ್ತೆಗಳು, ಉಡುಪಿಯ ಸಂತೆಕಟ್ಟೆ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿಯುವ ವಿಡಿಯೊವನ್ನು ಬಳಸಿಕೊಂಡು ಹಾಡನ್ನು ರಚಿಸಲಾಗಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರ ಖಾತೆಯಿಂದ ಪೋಸ್ಟ್ ಆಗಿರುವ ಈ ಹಾಡನ್ನು ಈಗಾಗಲೇ 1900ಕ್ಕೂ ಹೆಚ್ಚು ಮಂದಿ ಷೇರ್ ಮಾಡಿದ್ದು, 750ಕ್ಕೂ ಹೆಚ್ಚು ಮಂದಿ ಲೈಕ್‌ ಮಾಡಿದ್ದಾರೆ. ಈಚೆಗೆ ಚಿಕ್ಕಮಗಳೂರಿನಲ್ಲಿ ಶೋಭಾ ಅವರಿಗೆ ಟಿಕೆಟ್ ನೀಡದಂತೆ ಹಲವರು ಪತ್ರ ಚಳವಳಿ ನಡೆಸಿದ್ದರು.

- Advertisement -
spot_img

Latest News

error: Content is protected !!