- Advertisement -
- Advertisement -
ಗೋವಾ: ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವೈದ್ಯರ ಸೂಚನೆ ಮೇರೆಗೆ ಗೋವಾಗೆ ಶಿಫ್ಟ್ ಆಗಿದ್ದಾರೆ. ಹೀಗಾಗಿ ಸದ್ಯ ಗೋವಾದಲ್ಲಿರುವ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಲ್ಲಿ ಸೈಕಲ್ ಸವಾರಿ ಮಾಡುತ್ತಿರುವ ವಿಡಿಯೋ ಭಾರಿ ವೈರಲ್ ಆಗಿದೆ.
ಇಂದು ಬೆಳಗ್ಗೆ ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್‌ನ ಆವರಣದಲ್ಲಿ ಸೈಕಲ್ ಸವಾರಿ ಮಾಡಿದ್ದು, ಆ ದೃಶ್ಯವನ್ನು ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿ ಮಠ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನೇದಿನೆ ಹೆಚ್ಚುತ್ತಿದ್ದು, ಆರೋಗ್ಯ ದೃಷ್ಟಿಯಿಂದ ವೈದ್ಯರ ಸಲಹೆ ಮೇರೆಗೆ ತಮ್ಮ ಪುತ್ರ ರಾಹುಲ್ ಗಾಂಧಿ ಜತೆಯಲ್ಲಿ ಗೋವಾದಲ್ಲಿ ಉಳಿದುಕೊಂಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾಗೊವರೆಗೂ ಅವರು ಗೋವಾದಲ್ಲಿ ಇರಲಿದ್ದಾರೆ ಅಂತಾ ಮೂಲಗಳು ತಿಳಿಸಿವೆ.
- Advertisement -