Saturday, June 6, 2026
Homeತಾಜಾ ಸುದ್ದಿಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ  ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ  ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ನವದೆಹಲಿ; ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿಗೆ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ತಗುಲಿತ್ತು.

75 ವರ್ಷದ ಸೋನಿಯಾ ಗಾಂಧಿ ಇಂದು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಅವರ ಆರೋಗ್ಯ ಸ್ಥಿರವಾಗಿದೆ, ತಜ್ಞ ವೈದ್ಯರ ತಂಡ ಆರೋಗ್ಯದ ಬಗ್ಗೆ ನಿಗಾವಹಿಸಿದೆ ಎಂದು ಪಕ್ಷ ತಿಳಿಸಿದೆ.

ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಸೋನಿಯಾ ಗಾಂಧಿ ಗಂಗಾ ರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದ ಬಗ್ಗೆ ನಿಗಾವಹಿಸಲಾಗಿದೆ. ಸೋನಿಯಾ ಗಾಂಧಿ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪ್ರಕಟಣೆ ಹೇಳಿದೆ.

- Advertisement -

Latest News

error: Content is protected !!