Saturday, June 13, 2026
Homeಕರಾವಳಿಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದೇ ಡಿಕೆಶಿ-ಸಿದ್ದರಾಮಯ್ಯರನ್ನು ಜೋಡಿಸಲು: ನಳಿನ್‌

ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದೇ ಡಿಕೆಶಿ-ಸಿದ್ದರಾಮಯ್ಯರನ್ನು ಜೋಡಿಸಲು: ನಳಿನ್‌

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದೇ ಡಿಕೆಶಿ ಸಿದ್ದರಾಮಯ್ಯ ಅವರನ್ನು ಜೋಡಿಸಲು ಎಂಬರ್ಥದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಮಗನ ರಾಜಕೀಯ ಭವಿಷ್ಯಕ್ಕಾಗಿ ಎರಡು ದಿನದ ಮಟ್ಟಿಗೆ ಕರ್ನಾಟಕಕ್ಕೆ ಆಗಮಿಸಿರುವ ಸೋನಿಯಾ ಗಾಂಧಿಯವರಿಗೆ ಸಿಎಂ ಕುರ್ಚಿಯ ಭ್ರಮೆಯಲ್ಲಿ ಕಾದಾಡುತ್ತಿರುವ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಒಂದುಗೂಡಿಸಲು ವರ್ಷ ಸಾಕಾಗುವುದಿಲ್ಲ ಎಂದು ಅನಿಸುತ್ತಿದೆ’ ಎಂದು ಲೇವಡಿ ಮಾಡಿದ್ದಾರೆ. ಮೊದಲು ಇವರಿಬ್ಬರನ್ನು ಜೋಡಿಸಿ ನಂತರ ಮುಂದುವರೆಯಲು ಅವರು ಮಗನಿಗೆ ಹೇಳಲಿದ್ದಾರೆ’ ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್‌ನಲ್ಲಿ ಭವಿಷ್ಯ ನುಡಿದಿದ್ದಾರೆ.

.

- Advertisement -

Latest News

error: Content is protected !!