Saturday, April 20, 2024
Homeತಾಜಾ ಸುದ್ದಿರಾಜಕೀಯ ಪ್ರವೇಶದ ಸುಳಿವು ನೀಡಿದ ಸೋನಿಯಾ ಅಳಿಯ ರಾಬರ್ಟ್ ವಾದ್ರಾ

ರಾಜಕೀಯ ಪ್ರವೇಶದ ಸುಳಿವು ನೀಡಿದ ಸೋನಿಯಾ ಅಳಿಯ ರಾಬರ್ಟ್ ವಾದ್ರಾ

spot_img
- Advertisement -
- Advertisement -

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿರುವುದರ ವಿರುದ್ಧ ಕಿಡಿಕಾರಿರುವ ಅವರ ಅಳಿಯ ರಾಬರ್ಟ್ ವಾದ್ರಾ, ಅಗತ್ಯ ಉಂಟಾದರೆ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ.

ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ವಾದ್ರಾ, “ಈ ಸಂಸ್ಥೆಗಳು ವಿಚಾರಣೆಗೆ ಕರೆಸಿಕೊಂಡ ಒಬ್ಬ ಬಿಜೆಪಿ ನಾಯಕನ ಹೆಸರನ್ನು ಹೇಳಿ ನೋಡೋಣ. ಪ್ರತಿ ಬಾರಿಯೂ ತನ್ನ ನೀತಿಗಳ ಬಗ್ಗೆ ದೇಶಕ್ಕೆ ಅಸಮಾಧಾನ ಉಂಟಾಗುತ್ತಿದೆ ಎಂಬ ಭಾವನೆ ಬಿಜೆಪಿಯಲ್ಲಿ ಮೂಡಿದಾಗ, ಗಾಂಧಿ ಕುಟುಂಬಕ್ಕೆ ತೊಂದರೆ ಕೊಡಲು ಆರಂಭಿಸುತ್ತದೆ” ಎಂದು ಟೀಕಿಸಿದ್ದಾರೆ.

ಈ ದೇಶದಲ್ಲಿ ಬದಲಾವಣೆಯ ಅಗತ್ಯವಿದೆ. ದೇಶಕ್ಕೆ ಅಗತ್ಯವಿರುವ ಬದಲಾವಣೆಯನ್ನು ನಾನು ತರಬಲ್ಲೆ ಎಂದು ಜನರಿಗೆ ಅನಿಸಿದರೆ, ನಾನು ರಾಜಕಾರಣವನ್ನು ಪ್ರವೇಶಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಜನರು ಜಿಎಸ್‌ಟಿ ವಿಚಾರವಾಗಿ ಅಸಮಾಧಾನಗೊಂಡಿದ್ದಾರೆ ಎಂಬ ಕಾರಣಕ್ಕೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಈ ದಿನಗಳಲ್ಲಿ ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆಗಿಂತ ಇಡಿಯಿಂದಲೇ ಹೆಚ್ಚಿನ ನೋಟಿಸ್‌ಗಳು ಬರುತ್ತಿವೆ” ಎಂದಿದ್ದಾರೆ.

ಜಾರಿ ನಿರ್ದೇಶನಾಲಯದಲ್ಲಿ ಸೋನಿಯಾ ಗಾಂಧಿ ಅವರ ಜತೆ ಏಕೆ ಹೋಗಲಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಕುಟುಂಬದ ಜತೆಗಿದ್ದೇನೆ, ಆದರೆ ಇಡಿ ಕಚೇರಿಗೆ ಹೋಗಲು ಮತ್ತು ಸಮಸ್ಯೆ ಸೃಷ್ಟಿಸಲು ಬಯಸಿರಲಿಲ್ಲ ಎಂದು ಹೇಳಿದ್ದಾರೆ. “ಎಲ್ಲರನ್ನೂ ಬಂಧಿಸಿದರೆ, ಹೊರಗೆ ಇದ್ದು ಅನ್ಯಾಯದ ವಿರುದ್ಧ ಯಾರಾದರೂ ಇರಬೇಕು. ನಾನು ಅವರಿಗೆ (ಸೋನಿಯಾ ಗಾಂಧಿ) ತನಿಖಾ ಸಂಸ್ಥೆಯನ್ನು ಹೇಗೆ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದೆ. ಏಕೆಂದರೆ ನಾನು 15 ಬಾರಿ ಇ.ಡಿಗೆ ಹೋಗಿದ್ದೆ ಮತ್ತು 23,000 ದಾಖಲೆಗಳನ್ನು ಸಲ್ಲಿಸಿದ್ದೇನೆ” ಎಂದಿದ್ದಾರೆ.

- Advertisement -
spot_img

Latest News

error: Content is protected !!