Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ :ಎಸ್ ಐಟಿಗೆ ದೂರು ದಾಖಲಿಸಿದ ಸೌಜನ್ಯ ತಾಯಿ ಕುಸುಮಾವತಿ

ಬೆಳ್ತಂಗಡಿ :ಎಸ್ ಐಟಿಗೆ ದೂರು ದಾಖಲಿಸಿದ ಸೌಜನ್ಯ ತಾಯಿ ಕುಸುಮಾವತಿ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ  ತನಿಖೆ ನಡೆಸುತ್ತಿರುವ ಎಸ್.ಐ.ಟಿ  ಕಚೇರಿಗೆ ಆಗಮಿಸಿದ ಸೌಜನ್ಯ  ತಾಯಿ ಕುಸುಮಾವತಿ ಅವರು ಎಸ್.ಐ.ಟಿ ಅಧಿಕಾರಿಗಳಿಗೆ ಆ.28 ರಂದು ಗುರುವಾರ ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ

ಪಾಂಗಳದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ  ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ  ಆಗಮಿಸಿದ್ದು‌ ಅಧಿಕಾರಿಗಳ ಅನುಮತಿ ಸಿಗದ ಕಾರಣ ಆರಂಭದಲ್ಲಿ ಅಲ್ಲಿಂದ  ಹಿಂತಿರುಗಿದ್ದರು. ಆದರೆ ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ. ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ  ಯುಟ್ಯೂಬರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ‌ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!