Wednesday, May 22, 2024
Homeಕರಾವಳಿಬೆಳ್ತಂಗಡಿ; ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸದೇ ಇದ್ದರೆ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ; ಬೃಹತ್ ಪ್ರತಿಭಟನಾ...

ಬೆಳ್ತಂಗಡಿ; ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸದೇ ಇದ್ದರೆ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ; ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಕೆ

spot_img
- Advertisement -
- Advertisement -

ಬೆಳ್ತಂಗಡಿ; ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸದೇ ಇದ್ದರೆ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ ಎಂದು ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ತಿಮರೋಡಿ ಎಚ್ಚರಿಕೆ ಕೊಟ್ಟಿದ್ದಾರೆ.  

ಬೆಳ್ತಂಗಡಿಯಲ್ಲಿ ಸೆ.3ರಂದು ನಡೆದ ಬೃಹತ್ ಪ್ರತಿಭಟನಾ ಸಭೆಯ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಕೊಡಿಸಲು ಶುರುವಾದ ಹೋರಾಟ ಸಂಗ್ರಾಮದ ರೂಪವನ್ನು ಪಡೆದಿದೆ. ಈ ಹೋರಾಟವನ್ನು ಹತ್ತಿಕ್ಕಲು ಮುಂದಾದರೆ ಸರ್ಕಾರಕ್ಕೆ ಶಾಪ ತಟ್ಟುತ್ತದೆ. ಜನರು ದಂಗೆ ಎದ್ದರೆ ಅದಕ್ಕೆ ಆಡಳಿತ ಮತ್ತು ರಾಜಕೀಯ ವ್ಯಕ್ತಿಗಳೇ ನೇರ ಹೊಣೆ. ಮರು ತನಿಖೆ ಆಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಪ್ರತಿಭಟನಾ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿದ್ದರು.  ಪ್ರತಿಭಟನಕಾರರಿಂದ ಇಲ್ಲಿನ ಮಿನಿ ವಿಧಾನಸೌಧದ ಆವರಣ ತುಂಬಿ ಹೋಗಿತ್ತು. ಇಲ್ಲಿನ ಬಸ್ ನಿಲ್ದಾಣ ಹಾಗೂ ಮೂರು ಮಾರ್ಗದವರೆಗೂ ಜನ ಕಿಕ್ಕಿರಿದು ಸೇರಿದ್ದರು.

ಪ್ರತಿಭಟನಕಾರರ ಆಕ್ರೋಶದ ನುಡಿಗಳನ್ನು ಜನ ಪಟ್ಟಣದ ಗಲ್ಲಿ ಗಲ್ಲಿಗಳಲ್ಲಿ ತಾಸುಗಟ್ಟಲೆ ನಿಂತುಕೊಂಡೇ ಆಲಿಸಿದರು. ಸಂತೆ ಕಟ್ಟೆಯ ಬಳಿ, ಮೂರು ಮಾರ್ಗದ ಬಳಿ, ಬಸ್‌ನಿಲ್ದಾಣದ ಬಳಿ ಅಳವಡಿಸಿದ್ದ ಎಲ್‌ಇಡಿ ಪರದೆಗಳ ಮೂಲಕವು ಪ್ರಮುಖರ ಭಾಷಣಗಳನ್ನು ವೀಕ್ಷಿಸಿದರು. ಮಂಗಳೂರು ಕಡೆಗಿನ ರಸ್ತೆಯಲ್ಲಿ ಸಂತೆಕಟ್ಟೆವರೆಗೆ ಹಾಗೂ ಉಜಿರೆ ಕಡೆಯ ರಸ್ತೆಯಲ್ಲಿದ ಲಾಯಿಲವರೆಗೆ ಧ್ವನಿವರ್ಧಕದ ವ್ಯವಸ್ಥೆ ಕಲ್ಪಿಸಲಾಗಿತ್ತು.

ತಾಲೂಕು ಕ್ರೀಡಾಂಗಣದಲ್ಲಿ ಪ್ರತಿಭಟನೆಗೆ ಅವಕಾಶ ನೀಡದ ಜಿಲ್ಲಾಡಳಿತದ ವಿರುದ್ಧ ಹಾಗೂ ಈ ಕುರಿತು ಒತ್ತಡ ಹಾಕಿದ ರಾಜಕೀಯ ಮುಖಂಡರ ವಿರುದ್ಧ ಪ್ರತಿಭಟನಕಾರರು ಕಿಡಿಕಾರಿದರು.

- Advertisement -
spot_img

Latest News

error: Content is protected !!