Monday, June 8, 2026
Homeತಾಜಾ ಸುದ್ದಿಸೌರವ್ ಗಂಗೂಲಿ ಅವರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನ್ಯಾಯವಾಗಿ ಹೊರಗಿಡಲಾಗಿದೆ: ಮಮತಾ ಬ್ಯಾನರ್ಜಿ

ಸೌರವ್ ಗಂಗೂಲಿ ಅವರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನ್ಯಾಯವಾಗಿ ಹೊರಗಿಡಲಾಗಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಕೊಲ್ಕತ್ತಾ: ಭಾರತೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿದ್ದ ಸೌರವ್ ಗಂಗೂಲಿ ಅವರ ಅಧಿಕಾರಾವಧಿ ಮುಗಿದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಗೂಲಿ ಅವಕಾಶದಿಂದ ವಂಚಿತರಾಗಿದ್ದಾರೆಎಂದು ಹೇಳಿದ್ದಾರೆ.

ಗಂಗೂಲಿ ಅವರನ್ನು ಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಮಮತಾ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಸೌರವ್ ಗಂಗೂಲಿ ಅವರನ್ನು “ಅನ್ಯಾಯವಾಗಿ ಹೊರಗಿಡಲಾಗಿದೆ” ಎಂದು ಬಂಗಾಳ ಮುಖ್ಯಮಂತ್ರಿ ಹೇಳಿದರು. ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಮತಾ, ನನಗೆ ತುಂಬಾ ದುಃಖವಾಗಿದೆ. ಸೌರವ್ ಬಹಳ ಜನಪ್ರಿಯ ವ್ಯಕ್ತಿ. ಅವರು ಭಾರತ ತಂಡದ ನಾಯಕರಾಗಿದ್ದರು. ಅವರು ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಬಂಗಾಳದ ಹೆಮ್ಮೆ ಮಾತ್ರವಲ್ಲ, ಭಾರತದ ಹೆಮ್ಮೆ. ಅವರನ್ನು ಯಾಕೆ ಅನ್ಯಾಯವಾಗಿ ಹೊರಗಿಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -

Latest News

error: Content is protected !!