Saturday, June 6, 2026
Homeಕರಾವಳಿಉಡುಪಿಉಡುಪಿ: ಮಂಗಳಮುಖಿಯರ ಅನೈತಿಕ ದಂಧೆಯ ವಿರುದ್ಧ ಕಾರ್ಯಾಚರಣೆಗಿಳಿದ ಎಸ್‌ಪಿ

ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆಯ ವಿರುದ್ಧ ಕಾರ್ಯಾಚರಣೆಗಿಳಿದ ಎಸ್‌ಪಿ

- Advertisement -
- Advertisement -

ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆಯ ವಿರುದ್ಧ ನಿನ್ನೆ(ಗುರುವಾರ) ತಡರಾತ್ರಿ ಖುದ್ದು ಎಸ್ಪಿ ಕಾರ್ಯಾಚರಣೆಗಿಳಿದ ಘಟನೆ ಸಿಟಿ ಬಸ್ ನಿಲ್ದಾಣ ಸಮೀಪ ನಡೆದಿದೆ.  ಮಂಗಳಮುಖಿಯರು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ತಾವೇ ಕಾರ್ಯಾಚರಣೆ ನಡೆಸಿದ್ದು, ಮಂಗಳಮುಖಿಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  

ಈ ವೇಳೆ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಇಬ್ಬರು ಪಿಂಪ್ ಗಳು ಗ್ರಾಹಕರನ್ನು ರಿಕ್ಷಾದಲ್ಲಿ ಕರೆತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಇವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!