Sunday, April 28, 2024
Homeತಾಜಾ ಸುದ್ದಿವಿಧಾನಸೌಧದಲ್ಲಿ ಭದ್ರತೆ ಹೆಚ್ಚಿಸಲು ವಿಧಾನಸಭೆ ಸ್ಪೀಕರ್ ಖಾದರ್ ಚಿಂತನೆ

ವಿಧಾನಸೌಧದಲ್ಲಿ ಭದ್ರತೆ ಹೆಚ್ಚಿಸಲು ವಿಧಾನಸಭೆ ಸ್ಪೀಕರ್ ಖಾದರ್ ಚಿಂತನೆ

spot_img
- Advertisement -
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಬಾಂಬ್ ಸ್ಫೋಟ ಪ್ರಕರಣ ಮತ್ತು ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಹೆಚ್ಚುವರಿ ಭದ್ರತೆ ಒದಗಿಸುವ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಚಿಂತನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಾಂಬ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚಬಲ್ಲ ತರಬೇತಿ ಹೊಂದಿರುವ ಶ್ವಾ‌ನದಿಂದ ಪ್ರಾತ್ಯಕ್ಷಿಕೆ ನಡೆಸಲಾಗಿದೆ.

ವಿಧಾನಸೌಧದಲ್ಲಿ ಖಾಸಗಿ ಸಂಸ್ಥೆಯಿಂದ ಬಾಂಬ್ ಡಿಟೆಕ್ಷನ್ ಪ್ರಾತ್ಯಕ್ಷಿಕೆ ನಡೆಸಲಾಗಿದ್ದು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಾತ್ಯಕ್ಷಿಕೆಯಲ್ಲಿ ಬಳಸಲಾದ ತರಬೇತಿ ಹೊಂದಿರುವ ಶ್ವಾನ, ಬಚ್ಚಿಡಲ್ಪಟ್ಟಿರುವ ಸ್ಫೋಟಕ ವಸ್ತುಗಳನ್ಜು ಪತ್ತೆ ಹಚ್ಚುವ ಸಾಮರ್ಥ್ಯವನ್ನು ಹೊಂದಿದೆ.

ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಗಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಭದ್ರತೆ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಗಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಭದ್ರತೆ ಹೆಚ್ಚಿಸುವ ಸಲುವಾಗಿ ವಿಧಾನಸಭೆ ಸ್ಪೀಕರ್ ಚಿಂತಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಮುತುವರ್ಜಿಯಿಂದ ಖಾಸಗಿ ಸಂಸ್ಥೆಯಿಂದ ಪ್ರಾತ್ಯಕ್ಷಿಕೆ ನಡೆದಿದ್ದು, ಖಾಸಗಿ ಸಂಸ್ಥೆ ತೋರಿಸಿದ ಪ್ರಾತ್ಯಕ್ಷಿಕೆಯ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಜೊತೆ ಸ್ಪೀಕರ್ ಖಾದರ್ ಚರ್ಚೆ ನಡೆಸಲಿದ್ದಾರೆ.

- Advertisement -
spot_img

Latest News

error: Content is protected !!