Tuesday, September 15, 2026
Homeಕರಾವಳಿಮಂಗಳೂರಿನಲ್ಲಿ ಸೆ. 18ಕ್ಕೆ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮಂಗಳೂರಿನಲ್ಲಿ ಸೆ. 18ಕ್ಕೆ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

- Advertisement -
- Advertisement -

ಬೆಂಗಳೂರು: ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸುವ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.

ಈ ಕುರಿತು ‘ಎಕ್ಸ್’ (ಟ್ವಿಟರ್) ತಾಣದಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಅವರು, ಕರಾವಳಿ ಭಾಗದ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ತಿಳಿದು ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಬಂದರು ಅಭಿವೃದ್ಧಿ, ಮೂಲಸೌಕರ್ಯ, ಮೀನುಗಾರಿಕೆ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ಹೊಸ ಚೈತನ್ಯ ತುಂಬುವ ಮೂಲಕ ಕರಾವಳಿಯ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಶೇಷವೆಂದರೆ, ತಮ್ಮ ವಿಡಿಯೋ ಸಂದೇಶದ ಕೊನೆಯಲ್ಲಿ ‘ಮಾತೆರೆಗ್​ಲ ಸೊಲ್ಮೆಲು’ (ಎಲ್ಲರಿಗೂ ವಂದನೆಗಳು) ಎಂದು ತುಳು ಭಾಷೆಯಲ್ಲೇ ಶುಭಕೋರುವ ಮೂಲಕ ಕರಾವಳಿ ಜನರ ಗಮನ ಸೆಳೆದಿದ್ದಾರೆ.

- Advertisement -

Latest News

error: Content is protected !!