Friday, May 17, 2024
Homeತಾಜಾ ಸುದ್ದಿಇಂದಿನಿಂದ ಚಂದನ ವಾಹಿನಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆಯ ಪಾಠಗಳು ಪ್ರಸಾರ

ಇಂದಿನಿಂದ ಚಂದನ ವಾಹಿನಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆಯ ಪಾಠಗಳು ಪ್ರಸಾರ

spot_img
- Advertisement -
- Advertisement -

ಬೆಂಗಳೂರು : ಕೊರೊನಾದಿಂದಾಗಿ ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಎಷ್ಟೆಲ್ಲಾ ಸಮಸ್ಯೆಗಳು ಆಗುತ್ತಿವೆ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಮಕ್ಕಳಿಗೆ ಈಗಾಗಲೇ ಬಹುತೇಕ ಎಲ್ಲಾ ಖಾಸಗಿ ಶಾಲೆಗಳಲ್ಲೂ ಆನ್ ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೀಗಿರುವಾಗ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕೊರೊನಾದಿಂದಾಗಿ ಓದಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಇಂದಿನಿಂದ 20 ದಿನಗಳ ಕಾಲ ಚಂದನ ವಾಹಿನಿಯಲ್ಲಿ ಇ ಕ್ಲಾಸ್ ಕಲಿಕಾ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತಿದೆ.

08 ರಿಂದ 10ನೇ ತರಗತಿಯ ಮಕ್ಕಳಿಗೆ ಪ್ರಥಮ ಭಾಷೆ ಕನ್ನಡ, ಸಂಸ್ಕೃತ, ಉರ್ದು, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಲ್ಲಿ ಸೇತುಬಂಧ ಕಾರ್ಯಕ್ರಮವನ್ನು ದೂರದರ್ಶನ ಚಂದನ ವಾಹಿನಿಯಲ್ಲಿ ಬಿತ್ತರಿಸಲಾಗುವುದು.

20 ದಿನಗಳ ಈ ಸೇತುಬಂಧ ತರಗತಿಗಳ ಬಳಿಕ 08 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ದೈನಂದಿನ ಬೋಧನೆ ಮುಂದುವರೆಯಲಿದೆ.

ಮುಂದಿನ ದಿನಗಳಲ್ಲಿ 1-10 ನೇ ತರಗತಿಯ ಎಲ್ಲಾ ಮಕ್ಕಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವಿಡಿಯೋ ಪಾಠಗಳನ್ನು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ದೂರದರ್ಶನ ಚಂದನ ವಾಹಿನಿಯು ಪ್ರಸಾರ ಮಾಡಲಿದೆ.

- Advertisement -
spot_img

Latest News

error: Content is protected !!