ಬಂಟ್ವಾಳ: ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ವಿಚಾರ ಸಂಕಿರಣ ಮಂಗಳವಾರದಂದು ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಮಟ್ಟದ ಏಜೆಂಟ್‌ಗಳು ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷರಿಗಾಗಿ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಜಾಗೃತ ಕರ್ನಾಟಕದ ಡಾ. ವಾಸು ಎಚ್.ವಿ. ಅವರು ಭಾಗವಹಿಸಿದ್ದು, ನಂತರದಲ್ಲಿ ಅವರು ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ಜಾಗೃತ ಕರ್ನಾಟಕದ ಸದಸ್ಯರಾದ ರಜನೀಕಾಂತ್, ಸಂತೋಷ್, ಮೋಹನ್ ಜಿ.ಕೆ. ಸಹಕರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿ ದುರ್ಗಾ ಪ್ರಸಾದ್, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡೆನ್ನಿಸ್ ಡಿ.ಸಿಲ್ವ, ಜಿಲ್ಲಾ ಲೀಗಲ್ ಸೆಲ್ ಅಧ್ಯಕ್ಷ ಮನೋರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಭಂಡಾರಿ, ಬಾಲಕೃಷ್ಣ ಅಂಚನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ನಿವೃತ್ತ ಎಸಿಎಫ್ ಮುಹಮ್ಮದ್, ಪಕ್ಷ ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್,
ಅಬ್ಬಾಸ್ ಅಲಿ, ಕೆ. ಪದ್ಮನಾಭ ರೈ, ಶೈಲಜಾ ರಾಜೇಶ್, ಜಯಂತಿ ಪೂಜಾರಿ ಉಪಸ್ಥಿತರಿದ್ದರು.ಮಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.


