Wednesday, June 19, 2024
Homeಕರಾವಳಿಉಡುಪಿಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸ

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸ

spot_img
- Advertisement -
- Advertisement -

ಶಿರ್ವ: ಈಗಿನ ವಾಣಿಜ್ಯ ಕ್ಷೇತ್ರಗಳಲ್ಲಿ ಲೆಕ್ಕಪತ್ರಗಳ ಲೆಕ್ಕಚಾರ ಮಾಡಲು ಬೇಸಿಕ್ ಅಕೌಂಟಿಂಗ್ ಬಗ್ಗೆ ಎಲ್ಲಾ ಯುವಕರಲ್ಲಿ ಜ್ಞಾನದ ಅರಿವು ಇರಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಸ್ಯಾಮ್ ಜೋಯಲ್ ಡೈಸ್ ರವರು ಪ್ರಾಯೋಗಿಕವಾಗಿ ವಿವರಿಸಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಉದ್ಯೋಗ ಕ್ಷೇತ್ರದಲ್ಲಿ ಅಕೌಂಟಿಂಗ್ ಎಕ್ಸ್ಪರ್ಟ್ ಗಳಿಗೆ ವಿಪುಲ ಅವಕಾಶಗಳು ಲಭ್ಯವಿದೆ. ಸರಿಯಾದ ಮಾರ್ಗದರ್ಶನ ಮತ್ತು ಮಾಹಿತಿ ಪಡೆದು ಅಕೌಂಟಿಂಗ್ ವಿಷಯದಲ್ಲಿ ವಿದ್ಯಾರ್ಥಿಗಳು ಸಂಶೋಧನಾ ಮನಸ್ಥಿತಿಯನ್ನು ಬೆಳೆಸಿಕೊಂಡು ದೇಶಕ್ಕೆ ತಮ್ಮ ಅಮೂಲ್ಯ ಕೊಡುಗೆಗಳನ್ನು ನೀಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಧುನಿಕ ತಂತ್ರಜ್ಞಾನದಲ್ಲಿ ಕಂಪ್ಯೂಟರ್ ವಿದ್ಯಾರ್ಥಿಗಳಿಗೆ ವಿವಿಧ ಅವಕಾಶಗಳಿದ್ದು, ವಾಣಿಜ್ಯ ಕ್ಷೇತ್ರದಲ್ಲಿಯೂ ಚಾರ್ಟರ್ಡ್ ಅಕೌಂಟೆನ್ಸಿ ,ಟ್ಯಾಲಿ ಮತ್ತು ಎಸ್ಎಪಿ ಅಂತ ವಿಷಯಗಳಲ್ಲಿ ಜ್ಞಾನ ಪಡೆಯಲು ಬೇಸಿಕ್ ಅಕೌಂಟಿಂಗ್ ಸಹಾಯಕಾರಿ ಮತ್ತು ವಿವಿಧ ಸಂಸ್ಥೆಯಲ್ಲಿ ಲಭ್ಯವಿರುವ ಅಕೌಂಟೆಂಟ್ ಹಾಗೂ ಎಸ್ಎಪಿ ಇಂಜಿನಿಯರ್ ಉದ್ಯೋಗ ಪಡೆಯಲು ಬಿಸಿಎ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಇದೊಂದು ನವಿಲುಗರಿ ಎಂದು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಾಹಿತಿ ತಂತ್ರಜ್ಞಾನ ಕ್ಲಬ್ ನ ನಿರ್ದೇಶಕ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ರವರು ಪ್ರಾಸ್ತವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಪ್ರಕಾಶ್, ಬಿಸಿಎ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು. ಕು. ಸುರೇಖಾ ಮತ್ತು ಬಳಗ ಪ್ರಾರ್ಥಿಸಿ,ಕು. ದೀಕ್ಷಾ ಪಿ ಜಿ ವಂದಿಸಿ, ಕು. ದ್ಯುತಿಶ್ರೀ ಸ್ವಾಗತಿಸಿ, ಕು. ಪ್ರೀತಿಕಾ ಕಾರ್ಯಕ್ರಮ ನಿರೂಪಿಸಿದರು

- Advertisement -
spot_img

Latest News

error: Content is protected !!