Thursday, June 4, 2026
Homeತಾಜಾ ಸುದ್ದಿಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟ ಕಂದಾಯ ಸಚಿವರು; ಪಬ್, ಬಾರ್ ಗಳಲ್ಲಿ ಎಣ್ಣೆ ಹೊಡಿಯಲು...

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟ ಕಂದಾಯ ಸಚಿವರು; ಪಬ್, ಬಾರ್ ಗಳಲ್ಲಿ ಎಣ್ಣೆ ಹೊಡಿಯಲು ಬಂದಿದೆ ಸ್ಪೆಷಲ್ ಮಾಸ್ಕ್

- Advertisement -
- Advertisement -

ಬೆಂಗಳೂರು: ಕೊರೊನಾದೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದ್ದು, ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ.ಹೀಗಿರುವಾಗಲೇ ಹೊಸ ವರ್ಷಾಚರಣೆಗೆ ಬಾರ್ ಹಾಗೂ ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಮಾರುಕಟ್ಟೆಯಲ್ಲಿ ಈಗಾಗಲೇ ವಿಶೇಷ ಮಾಸ್ಕ್ ಬಿಡುಗಡೆಯಾಗಿದೆ.

ಆದ್ದರಿಂದ ಮದ್ಯ ಪ್ರಿಯರು ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

ಬಾರ್, ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ಬಂದಿದೆ, ಬರುವ ಗ್ರಾಹಕರಿಗೆ ಆ ಮಾಸ್ಕ್ಗಳನ್ನು ನೀಡಬೇಕು. ಇದರಿಂದ ಯಾರಿಗೂ ತೊಂದರೆಯಾಗೋದಿಲ್ಲ. ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.

- Advertisement -

Latest News

error: Content is protected !!