Thursday, June 25, 2026
Homeಕರಾವಳಿಮಂಗಳೂರುಅಶೋಕ‌ ಜನಮನ‌ 2025 ಯಶಸ್ವಿಗೆ  ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ  ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ...

ಅಶೋಕ‌ ಜನಮನ‌ 2025 ಯಶಸ್ವಿಗೆ  ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ  ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

- Advertisement -
- Advertisement -

ಪುತ್ತೂರು: ಅ.20  ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು ಕಾರ್ಯಕ್ರಮ ಯಶಸ್ವಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಿತು.

ಈ ಕಾರ್ಯಕ್ರಮದ ಯಾವುದೇ ವಿಘ್ನಗಳು ಇಲ್ಲದೇ ಬಹಳ ಯಶಸ್ವಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಸರ್ವ ಧರ್ಮದ ಧಾರ್ಮಿಕ ಕೇಂದ್ರ ಗಳಲ್ಲಿ ಪ್ರಾರ್ಥನೆ ಯನ್ನುಮಾಡುವುದಾಗಿ ತಿರ್ಮಾನಿಸಲಾಗಿದೆ.

ಈ ವೇಳೆ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಶಾಸಕ ಅಶೋಕ್ ರೈ ನೇತೃತ್ವದಲ್ಲಿ ‌ನಡೆಯುವ ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆದಿದೆ. ಎಲ್ಲವೂ ನಿರ್ವಿಘ್ನವಾಗಿ ನಡೆದು ಕಾರ್ಯಕ್ರಮ ಯಶಸ್ವಿಯಾಗಲಿಎಂದು ದೇವರಲ್ಲಿ ಬೇಡಿಕೊಳ್ಳಲಾಗಿದೆ. ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಕ್ಕೆ ತೆರಳಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಲಿದೆ ಎಂದರು.

ಈ ವೇಳೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ,ಮಹಾಬಲ ರೈ, ಸಂತೋಷ್ ಭಂಡಾರಿ,ಸುಸರ್ಶನ್, ಗಿರೀಶ್ ರೈ ಸಂಟ್ಯಾರ್, ದಾಮೋದರ್ ಮುರ, ರೂಪರೇಖಾ ಆಳ್ವ, ಹರಿಣಾಕ್ಷೆ. ಜಯಂತ ಕೆಂಗುಡೇಲು, ಪೂರ್ಣೇಶ್ ಭಂಡಾರಿ,ರಂಜಿತ್ ಬಂಗೇರ ಸೇರಿದಂತೆ  ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!