Saturday, June 6, 2026
Homeತಾಜಾ ಸುದ್ದಿಕಾಶಿ ಯಾತ್ರಿಕರಿಗಾಗಿ ಮುಜರಾಯಿ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಅನುಷ್ಠಾನ

ಕಾಶಿ ಯಾತ್ರಿಕರಿಗಾಗಿ ಮುಜರಾಯಿ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಅನುಷ್ಠಾನ

- Advertisement -
- Advertisement -

ಬೆಂಗಳೂರು: ಕಾಶಿ ಯಾತ್ರಿಕರಿಗಾಗಿ ರಾಜ್ಯ ಸರ್ಕಾರ ಮತ್ತೊಂದು ಯೋಜನೆ ರೂಪಿಸಿದೆ. ಕಾಶಿ ಯಾತ್ರೆಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಧಾರ್ಮಿಕ ಮತ್ತು ದತ್ತಿ ಇಲಾಖೆ ಸಿದ್ಧಪಡಿಸಿದೆ.

ಕೇಂದ್ರ ಸರಕಾರದ ಭಾರತ್ ಗೌರವ್ ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ದತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೋಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ.

ಮುಜರಾಯಿ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಈ ಹೊಸ ಯೋಜನೆಯ ಕುರಿತಾಗಿ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!