Saturday, October 17, 2026
Homeಕರಾವಳಿಮಂಗಳೂರುಗಣೇಶ ಚತುರ್ಥಿ ಹಬ್ಬಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

ಗಣೇಶ ಚತುರ್ಥಿ ಹಬ್ಬಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

- Advertisement -
- Advertisement -

ಮಂಗಳೂರು;ಗಣೇಶ ಚತುರ್ಥಿ ಹಬ್ಬಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ತಮ್ಮ ಮನವಿ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಿದ್ದು, ಚೌತಿಯ ಮುನ್ನಾದಿನದಂದು ಊರಿಗೆ ವಾಪಸಾಗಲು ಅನುಕೂಲವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ಕುಟುಂಬದೊಂದಿಗೆ ಸೇರಿಕೊಳ್ಳಲು ಅನುಕೂಲವಾಗುವಂತೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿಕೊಟ್ಟ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವಿ ಮತ್ತು ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ಸಂಸದ ಕ್ಯಾ.ಚೌಟ ಹೇಳಿದ್ದಾರೆ.

- Advertisement -

Latest News

error: Content is protected !!