Saturday, May 4, 2024
Homeಕರಾವಳಿಏಪ್ರಿಲ್ 14 ರಂದು ಪ್ರಧಾನಿ ರೋಡ್ ಶೋ ಹಿನ್ನೆಲೆ; ಮಂಗಳೂರಿನಲ್ಲಿ ಎಸ್ ಪಿಜಿ ಅಧಿಕಾರಿಗಳಿಂದ ಪರಿಶೀಲನೆ

ಏಪ್ರಿಲ್ 14 ರಂದು ಪ್ರಧಾನಿ ರೋಡ್ ಶೋ ಹಿನ್ನೆಲೆ; ಮಂಗಳೂರಿನಲ್ಲಿ ಎಸ್ ಪಿಜಿ ಅಧಿಕಾರಿಗಳಿಂದ ಪರಿಶೀಲನೆ

spot_img
- Advertisement -
- Advertisement -

ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಏಪ್ರಿಲ್ 14 ರಂದು ಸಂಜೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಇಂದು ಎಸ್ ಪಿಜಿ ಅಧಿಕಾರಿಗಳು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಧಾನಿ ರೋಡ್ ಶೋ ನಡೆಯುವ ಮಾರ್ಗದಲ್ಲಿ ಲೇಡಿಹಿಲ್ ನಲ್ಲಿರುವ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ಸರ್ಕಲ್ ವರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಏಪ್ರಿಲ್ 14 ರಂದು ಸಂಜೆ 6 ಗಂಟೆಗೆ ಮಂಗಳೂರು ನಗರದಲ್ಲಿ ಸುಮಾರು 2.5 ಕಿಲೋ ಮೀಟರ್ ದೂರ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಪ್ರಧಾನಿ ರೋಡ್ ಶೋ ಆರಂಭಿಸಲಿದ್ದಾರೆ.

ಎಸ್ ಪಿಜಿ ಅಧಿಕಾರಿಗಳ ಸ್ಥಳ ಪರಿಶೀಲನೆ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡಾ ಉಪಸ್ಥಿತರಿದ್ದರು.

ಏಪ್ರಿಲ್ 14 ರಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಬಳಿಕ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ.

- Advertisement -
spot_img

Latest News

error: Content is protected !!