Friday, June 5, 2026
Homeಕರಾವಳಿಉಡುಪಿಉಡುಪಿಯ ಅಜ್ಜರಕಾಡಿನಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟನೆ

ಉಡುಪಿಯ ಅಜ್ಜರಕಾಡಿನಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಉದ್ಘಾಟನೆ

- Advertisement -
- Advertisement -

ಉಡುಪಿ: ರಾಜ್ಯದ ಮೂರನೇ ಕ್ರೀಡಾ ವಿಜ್ಞಾನ ಕೇಂದ್ರವನ್ನು ಕೇಂದ್ರ ಕ್ರೀಡಾ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಉದ್ಘಾಟಿಸಿದರು‌.

ಈ ಸಂಧರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಉಪಸ್ಥಿತರಿದ್ದರು.

ಉಡುಪಿಯ ಅಜ್ಜರಕಾಡಿನಲ್ಲಿ ರಾಜ್ಯ ಕ್ರೀಡಾ ಇಲಾಖೆ ವತಿಯಿಂದ ಸುಮಾರು 2.35 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇಂದು ಕೇಂದ್ರವನನ್ನು ಉದ್ಘಾಟನೆಗೊಳಿಸುವ ಮೂಲಕ ಕ್ರೀಡಾಪಟುಗಳ ಬಳಕೆಗೆ ಮುಕ್ತಗೊಳಿಸಲಾಗಿದೆ.ಇದೇ ವೇಳೆ ಕಾಮನ್ ವೆಲ್ತ್‌ನಲ್ಲಿ ಚಿನ್ನದ ಪದಕ ವಿಜೇತೆ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ಪುರಸ್ಕೃತೆ ಅಶ್ವಿನಿ ಅಕ್ಕುಂಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

- Advertisement -

Latest News

error: Content is protected !!