Wednesday, June 3, 2026
Homeಕರಾವಳಿಉಡುಪಿಉಡುಪಿಯಲ್ಲಿ ಇಎಸ್ ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಉಡುಪಿಯಲ್ಲಿ ಇಎಸ್ ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

- Advertisement -
- Advertisement -

ಉಡುಪಿ: ಉಡುಪಿಯ ವಾರಂಬಳ್ಳಿಯಲ್ಲಿ ಇಎಸ್ ಐ ಆಸ್ಪತ್ರೆ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಇಂದು ಸ್ಥಳ ಪರಿಶೀಲನೆ ನಡೆಸಿದರು.

ವಾರಂಬಳ್ಳಿಯಲ್ಲಿ ಸುಮಾರು ಐದು ಎಕರೆ ಜಾಗವನ್ನು ಆಸ್ಪತ್ರೆಗಾಗಿ ಮೀಸಲಿರಿಸಲಾಗಿದ್ದು, ಅಧಿಕಾರಿಗಳ ಜೊತೆಗೆ ಕೋಟ ಶ್ರೀನಿವಾಸ ಪೂಜಾರಿ ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ವಿಭಾಗೀಯ ಇಎಸ್ಐ ಅಧಿಕಾರಿ, ಇಎಸ್ಐ ಕಾರ್ಪೋರೇಷನ್ ಮ್ಯಾನೇಜರ್, ತಹಶೀಲ್ದಾರ್ ಹಾಗೂ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಮತ್ತು ಸದಸ್ಯರು ಉಪಸ್ಥಿತರಿದ್ದರು.

ವಾರಂಬಳ್ಳಿಯಲ್ಲಿ ಆದಷ್ಟು ಬೇಗ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ನೆರವೇರಿಸಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ ಎಂದು ಸ್ಥಳ ಪರಿಶೀಲನೆ ಬಳಿಕ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

- Advertisement -

Latest News

error: Content is protected !!