Friday, June 5, 2026
Homeಕರಾವಳಿಶರಣ್ ಪಂಪ್ ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ನಾಲ್ವರು ಆರೋಪಿಗಳನ್ನು...

ಶರಣ್ ಪಂಪ್ ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು : ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ   ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುಳ್ಯ ಕಸಬಾದ ಭವಾನಿ ಶಂಕರ್ (32), ಬಜಾಲ್ ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಮೂಡಿಬಿದಿರೆಯ ಧರೆಗುಡ್ಡೆಯ ಜಯ ಕುಮಾರ್ (33) ಬಂಧಿತರು.

ಬಂಧಿತರು ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿಗೆ ಸಂಬಂಧಿಸಿದಂತೆ ಬಂದ ವಾಟ್ಸಾಪ್ ಸಂದೇಶವನ್ನು ಇತರ ಗ್ರೂಪ್ ಹಾಗೂ ಸ್ನೇಹಿತರಿಗೆ ರವಾನಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂದೇಶದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

- Advertisement -

Latest News

error: Content is protected !!