Saturday, May 18, 2024
Homeಉದ್ಯಮಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರಿಗೆ ಕೊರೊನಾ ಶಾಕ್

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರಿಗೆ ಕೊರೊನಾ ಶಾಕ್

spot_img
- Advertisement -
- Advertisement -

ಬೆಂಗಳೂರು : ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ  ಅವರಿಗೆ ಬಿಗ್ ಶಾಕ್. ಅವರಿಗೆ  ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶಾಸಕ ಟಿ.ಡಿ.ರಾಜೇಗೌಡ ಅವರು ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದು ಈ ವೇಳೆ ಅವರಿಗೆ ಸೋಂಕು ಇರುವುದು ತಿಳಿದುಬಂದಿದೆ. ಅವರನ್ನು  ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ರಾಜೇಗೌಡರು ಇತ್ತೀಚೆಗೆ ನಡೆದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಆದಕಾರಣ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಂಗನಾಥ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ರಾಜೇ ಗೌಡ ಅವರೂ ಕೂಡ ಕೊರೊನಾ ಟೆಸ್ಟ್ ಮಾಡಿದ್ದರು. ಇದೀಗ ಅವರಿಗೆ ಸೋಂಕು ತಗುಲಿರೋದು ಗೊತ್ತಾಗಿದೆ.

- Advertisement -
spot_img

Latest News

error: Content is protected !!