Monday, June 8, 2026
Homeಕರಾವಳಿಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಆಯ್ಕೆ!

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಆಯ್ಕೆ!

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿರುವ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಮತ್ತು ಭಾಸ್ಕರ ರೈ ಕಟ್ಟ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಮಂಗಳವಾರ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸಹಕಾರ ಸಂಘದ ಹಿರಿಯ ನಿರೀಕ್ಷಕ ಶಿವಲಿಂಗಯ್ಯ.ಎ ಚುನಾವಣಾಧಿಕಾರತ್ವದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಪ್ರಕ್ರಿಯೆಯಲ್ಲಿ ಉಭಯ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.

ಸಂಘದ ನಿರ್ದೇಶಕರಾದ ಕೇಶವ ಕುಂದರ್, ಪುಷ್ಪರಾಜ್ ಬಿ.ಎನ್., ಇಬ್ರಾಹಿಂ ಅಡ್ಕಸ್ಥಳ, ಆರಿಫ್ ಪಡುಬಿದ್ರೆ, ಜಿತೇಂದ್ರ ಕುಂದೇಶ್ವರ, ಆತ್ಮಭೂಷಣ್ ಭಟ್, ಸತ್ಯವತಿ, ಕೆ.ವಿಲ್‌ಫ್ರೆಡ್ ಡಿಸೋಜ, ವಿಜಯ ಕೋಟ್ಯಾನ್ ಪಡು, ಸುಖ್‌ಪಾಲ್ ಪೊಳಲಿ, ಸುರೇಶ್ ಡಿ. ಪಳ್ಳಿ, ಹರೀಶ್ ಮೋಟುಕಾನ, ಶಿಲ್ಪಾಕುಮಾರಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಿಷೇಕ್ ಕೆ. ಉಪಸ್ಥಿತರಿದ್ದರು.

- Advertisement -

Latest News

error: Content is protected !!