Saturday, May 18, 2024
Homeಉದ್ಯಮSRS ಟ್ರಾವೆಲ್ಸ್ ಮಾಲೀಕ ರಾಜಶೇಖರ್ ಕೋವಿಡ್-19 ಸೋಂಕಿಗೆ ಬಲಿ

SRS ಟ್ರಾವೆಲ್ಸ್ ಮಾಲೀಕ ರಾಜಶೇಖರ್ ಕೋವಿಡ್-19 ಸೋಂಕಿಗೆ ಬಲಿ

spot_img
- Advertisement -
- Advertisement -

ಬೆಂಗಳೂರು: ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಕೆ.ಟಿ. ರಾಜಶೇಖರ್ (78) ಕೊರೋನಾ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಕಳೆದ 10 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು.

ಮಾಗಡಿ ಮೂಲದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಜಶೇಖರ್ ಅವರು ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದು ಎಂದೇ ಗುರುತಿಸಿಕೊಂಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆ ಸ್ಥಾಪಿಸಿದ್ದರು. ಡಿಪ್ಲೊಮಾ ಇನ್ ಆಟೋಮೊಬೈಲ್ ವ್ಯಾಸಂಗ ಮಾಡಿದ್ದ ರಾಜಶೇಖರ್ ಅವರು, ಇದಕ್ಕೂ ಮುನ್ನ ಟೂರಿಸ್ಟ್ ಬುಕ್ಕಿಂಗ್ ಏಜೆಂಟ್, ಟ್ರಾವೆಲ್ ಏಜೆಂಟ್ ಹೀಗೆ ಹಲವು ರೀತಿಯ ಕೆಲಸಗಳನ್ನು ಮಾಡಿದ್ದರು.

1971ರಲ್ಲಿ ಒಂದು ಬಸ್ ಮೂಲಕ ಆರಂಭಿಸಲಾದ ಎಸ್‌ಆರ್‌ಎಸ್ ಟ್ರಾವೆಲ್ಸ್ ಸಂಸ್ಥೆ, ಇದೀಗ 3 ಸಾವಿರಕ್ಕೂ ಹೆಚ್ಚಿನ ಬಸ್‌ಗಳನ್ನು ಹೊಂದಿದೆ. ನಾಲ್ಕು ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ, ನೂರಾರು ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಸುತ್ತಿದೆ. ಬೆಂಗಳೂರು ಕೇಂದ್ರ ಕಚೇರಿಯಾಗಿದ್ದರೂ ಚೆನ್ನೈ, ಮುಂಬೈ, ವಿಜಯವಾಡ ಸೇರಿ ದೇಶದ ಇನ್ನಿತರ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ. ಇದೀಗ ಎಸ್‌ಆರ್‌ಎಸ್ ಸಂಸ್ಥೆ 50ನೇ ವರ್ಷಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿಯೇ ತನ್ನ ಒಡೆಯನನ್ನು ಕಳೆದುಕೊಂಡಿದೆ.

ಮೃಧು ಸ್ವಭಾವದವರಾಗಿದ್ದ ಕೆ.ಟಿ.ರಾಜಶೇಖರ್ ಇಳಿವಯಸ್ಸಿನಲ್ಲೂ ಚಟುವಟಿಕೆಯಿಂದ ಇರುತ್ತಿದ್ದರು. ಮೃತರು ಮಗಳು ಮೇಘ ಮತ್ತು ಅಳಿಯ ದೀಪಕ್ ಅವರನ್ನು ಅಗಲಿದ್ದಾರೆ. ಎಸ್‌ಆರ್‌ಎಸ್ ಟ್ರಾವೆಲ್ಸ್ ಸಂಸ್ಥೆ ಮುನ್ನಡೆಸಲು ಮೇಘ ಮತ್ತು ದೀಪಕ್, ರಾಜಶೇಖರ್ ಅವರಿಗೆ ನೆರವಾಗುತ್ತಿದ್ದರು.

- Advertisement -
spot_img

Latest News

error: Content is protected !!