Thursday, May 16, 2024
Homeತಾಜಾ ಸುದ್ದಿಕೊರೊನಾ ಭೀತಿ: ಈ ರಾಜ್ಯದಲ್ಲೂ SSLC ಪರೀಕ್ಷೆ ರದ್ದು..

ಕೊರೊನಾ ಭೀತಿ: ಈ ರಾಜ್ಯದಲ್ಲೂ SSLC ಪರೀಕ್ಷೆ ರದ್ದು..

spot_img
- Advertisement -
- Advertisement -

ಆಂಧ್ರಪ್ರದೇಶ: ಕರ್ನಾಟಕದಲ್ಲಿ ಸಾಕಷ್ಟು ಪರ ವಿರೋಧಗಳ ಹಿನ್ನಲೆಯಲ್ಲಿ ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ನೆರೆಯ ರಾಜ್ಯಗಳಾದ ತಮಿಳುನಾಡು, ತೆಲಂಗಾಣದಲ್ಲಿ ಕೊರೊನಾ ಅಟ್ಟಹಾಸ ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಇದರ ಬೆನ್ನಲ್ಲೇ ಈಗ ಈಗ ಆಂಧ್ರಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕು ಈವರೆಗೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 96 ಜನ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!