Wednesday, May 8, 2024
Homeತಾಜಾ ಸುದ್ದಿಬಿಗ್‌ ನ್ಯೂಸ್:‌ ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ಪ್ರಕಟ

ಬಿಗ್‌ ನ್ಯೂಸ್:‌ ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ಪ್ರಕಟ

spot_img
- Advertisement -
- Advertisement -

ಚಿಕ್ಕಬಳ್ಳಾಪುರ: ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಸೋಮವಾರ ಎಸ್‌ಎಸ್‌ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಲ್ಲದೇ ಶಾಲಾರಂಭ ಕುರಿತು ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ ಅಷ್ಟೊಂದು ವ್ಯತ್ಯಾಸ ಆಗಿಲ್ಲ. ಮಕ್ಕಳಿಗೆ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ. ಮಕ್ಕಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದರು.
ಇನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಜಾರಿಗೆ ತರಲಾಗುವುದು. ಜೊತೆಗೆ ತಜ್ಞರ ಅಭಿಪ್ರಾಯ ಪಡೆದ ನಂತರ ಯಾವ ರೀತಿಯಲ್ಲಿ ಆನ್ ಲೈನ್ ಶಿಕ್ಷಣ ಜಾರಿಗೆ ತರಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದರು.

- Advertisement -
spot_img

Latest News

error: Content is protected !!