ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 10 ನೇ ತರಗತಿ ಅಥವಾ ಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಯೋಜಿಸಿದೆ ಎಂದು ತಿಳಿಸಿದ್ದಾರೆ.ಆದರೆ, ಅಂತಿಮವೇಳಾಪಟ್ಟಿಯನ್ನು 20 ರಿಂದ 30 ದಿನಗಳ ಒಳಗೆ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ತಪಡಿಸಿದ್ದಾರೆ.
ಸುರೇಶ್ ಕುಮಾರ್ ಅವರು ಮಂಗಳವಾರ ಬೆಳಿಗ್ಗೆ ಫೇಸ್‌ಬುಕ್ ಲೈವ್ ನಲ್ಲಿ ಮಾತನಾಡಿದ್ದು ಪಈಕ್ಷಾ ಕೇಂದ್ರಗಳಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡಿಕೊಳ್ಳಬೇಕಿದ್ದು ಈ ನಿಟ್ಟಿನಲ್ಲಿ ಕೇಂದ್ರಗಳಲ್ಲಿ ಸ್ಯಾನಿಟೈಜರ್ ಬಳಕೆ ಹಾಗೂ ಸಾಮಾಜಿಕ ಅಂತರ ನೋಡಿಕೊಳ್ಳುವಂತೆ ಅವರು ಕೇಳಿದರು ಮತ್ತು ಪರೀಕ್ಷಕರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಹೇಳಿದ್ದಾರೆ.
ಪ್ರಸ್ತುತ ದೂರದರ್ಶನ ಚಂದನ ವಾಹಿನಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಷ್ಕರಣೆಗಾಗಿ ಕನ್ನಡದಲ್ಲಿ ಗಣಿತ ಮತ್ತು ವಿಜ್ಞಾನ ತರಗತಿಗಳನ್ನು ಪ್ರಸಾರ ಮಾಡುತ್ತಿದೆ. ಜೂನ್ ಮೊದಲ ವಾರದ ವೇಳೆಗೆ ದೂರದರ್ಶನ ಚಾನೆಲ್‌ನಲ್ಲಿ ಇಂಗ್ಲಿಷ್ ತರಗತಿಗಳು ಪ್ರಾರಂಭವಾಗಲಿವೆ ಎಂದು ಅವರು ಹೇಳಿದರು. ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ಸಾಹದಿಂದ ಸಿದ್ದವಿದ್ದಾರೆ ಎಂದಿರುವ ಸಚಿವ ಆದರೆ ಕೊರೋನಾ ಸಂಕಷ್ಟದ ವೇಳೆ ಪರೀಕ್ಷೆ ಸೂಕ್ತವಾಗಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.