Thursday, June 25, 2026
Homeತಾಜಾ ಸುದ್ದಿಸೋಮವಾರ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ!

ಸೋಮವಾರ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ!

- Advertisement -
- Advertisement -

ಬೆಂಗಳೂರು: ಸೋಮವಾರ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಸೋಮವಾರ ಸಂಜೆ 3.30ಕ್ಕೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಂಗಳೂರಿನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

ಜೂನ್ 19 ಹಾಗು 22ರಂದು ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಎರಡು ದಿನಗಳ ಕಾಲ ನಡೆಸಲಾಗಿತ್ತು. ಪರೀಕ್ಷೆಗೆ ಶೇಕಡಾ 99.65% ವಿದ್ಯಾರ್ಥಿಗಳ ಹಾಜರಾತಿ ಆಗಿತ್ತು.

8 ಲಕ್ಷದ 49 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕೊರೋನಾ ಸೋಂಕು ಆತಂಕದ ನಡುವೆಯೂ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗಿತ್ತು.

- Advertisement -

Latest News

error: Content is protected !!