Friday, June 5, 2026
Homeಕರಾವಳಿಉಡುಪಿಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಶಾಲೆಯಲ್ಲಿ ವರ್ಗಾವಣೆ ಪ್ರಮಾಣಪತ್ರ ಕೊಟ್ಟಿಲ್ಲ ಎಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಉತ್ತೀರ್ಣನಾಗಿದ್ದ ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.

ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ ವಿದ್ಯಾರ್ಥಿ ನಿತಿನ್, ಮುಖ್ಯೋಪಾಧ್ಯಾಯರು ಬೈದಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯಲ್ಲಿ ಬೈದಿರುವುದಕ್ಕೆ ಬೇಸರಗೊಂಡು ನಿತಿನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದ್ದು, ಬೈಂದೂರು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!